
ಆಗಸ್ಟ್ 2ರಂದು ನಡೆಯಲಿರುವ 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಗೆ ರಾಯಚೂರು ಮತ್ತು ಕೊಪ್ಪಳ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಪರಿಷ್ಕೃತ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಬೇಕು.
RPC ವೃಂದದ ಅಭ್ಯರ್ಥಿಗಳಿಗೆ ಬೆಳಗ್ಗೆ 10:30 ರಿಂದ 12:00 ರವರೆಗೆ ಮತ್ತು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪರೀಕ್ಷೆ ನಡೆಯಲಿದೆ.
ಅಭ್ಯರ್ಥಿಗಳು cetonline.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ, ಅರ್ಜಿ ಸಂಖ್ಯೆ ಮತ್ತು ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸಿ ಪ್ರವೇಶ ಪತ್ರವನ್ನು ಪಡೆಯಬಹುದು.