
ಸನ್ಸೇರಾ ಫೌಂಡೇಷನ್ ವತಿಯಿಂದ ವಿದ್ಯಾ ಪ್ರಗತಿ ಯೋಜನೆಯಡಿ, ಸರ್ಕಾರಿ ಶಾಲೆಗಳಲ್ಲಿ ಓದಿ ಶೇ 70ಕ್ಕಿಂತ ಹೆಚ್ಚು ಅಂಕಗಳಿಸಿದ ಆನೇಕಲ್ ತಾಲೂಕಿನ 529 ವಿದ್ಯಾರ್ಥಿಗಳಿಗೆ ಒಟ್ಟು ₹89.7 ಲಕ್ಷ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಕಳೆದ ಆರು ವರ್ಷಗಳಲ್ಲಿ ಈ ಫೌಂಡೇಷನ್ ವತಿಯಿಂದ ಒಟ್ಟು 1,776 ವಿದ್ಯಾರ್ಥಿಗಳಿಗೆ ₹2.8 ಕೋಟಿ ವಿದ್ಯಾರ್ಥಿವೇತನ ನೀಡಲಾಗಿದೆ ಎಂದು ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಫ್.ಆರ್. ಸಿಂಘ್ವಿ ತಿಳಿಸಿದ್ದಾರೆ.
ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಎಸ್.ಆರ್. ನಿರಂಜನ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದೇಶಗಳಲ್ಲಿ ಅಧ್ಯಯನ ಹಾಗೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಬಳಕೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.