
ಕಲಬುರಗಿಯ ಬ್ರಹ್ಮಪುರ ಠಾಣೆಯ ಕಾನ್ಸ್ಟೆಬಲ್ಗಳಾದ ಪರಶುರಾಮ ಮತ್ತು ವೀರೇಶ ಅವರನ್ನು ಲಂಚ ಸ್ವೀಕರಿಸಿದ ಆರೋಪದ ಮೇಲೆ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಅಮಾನತುಗೊಳಿಸಿದ್ದಾರೆ.
ಬಾಪು ನಗರದ ಕಾರ್ತಿಕ ಎಂಬಾತನಿಗೆ ಗಡಿಪಾರು ಮಾಡುವುದಾಗಿ ಬೆದರಿಸಿ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ₹20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾಳಿ ನಡೆದಾಗ ಪರಶುರಾಮ ಬಂಧನಕ್ಕೊಳಗಾಗಿದ್ದು, ಮತ್ತೊಬ್ಬ ಆರೋಪಿ ಕಾನ್ಸ್ಟೆಬಲ್ ವೀರೇಶ ಸ್ಥಳದಿಂದ ಪರಾರಿಯಾಗಿದ್ದಾನೆ.