
ಬೆಳಗಾವಿ ಜಿಲ್ಲೆಯ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ 2018-19 ರಿಂದ 2024-25ರ ಅವಧಿಯಲ್ಲಿ ₹16.58 ಕೋಟಿ ನಷ್ಟ ಉಂಟುಮಾಡಿದ ಆರೋಪದಡಿ 11 ಮಂದಿ ವಿರುದ್ಧ ದೂರು ದಾಖಲಾಗಿದೆ.
ಮಾಜಿ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಉದ್ಯೋಗಿಗಳು ಸೇರಿದಂತೆ 11 ಜನರ ವಿರುದ್ಧ ಹಾಲಿ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಅವರು ಚನ್ನಮ್ಮನ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಿವೃತ್ತ ನ್ಯಾಯಾಧೀಶ ಎಸ್.ಸಿ.ಇಂಗಳಗಿ ನೇತೃತ್ವದ ಸಮಿತಿಯು 300ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಪರಿಶೀಲಿಸಿ ಸಲ್ಲಿಸಿದ 200 ಪುಟಗಳ ವರದಿಯ ಆಧಾರದ ಮೇಲೆ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.