
ಪಾಕಿಸ್ತಾನ ಕ್ರಿಕೆಟ್ ತಂಡದ ಹಿರಿಯ ಆಟಗಾರ ಮೊಹಮ್ಮದ್ ರಿಝ್ವಾನ್ ಸಾರ್ವಜನಿಕವಾಗಿ ಅಥವಾ ಮಾಧ್ಯಮಗಳ ಮುಂದೆ ಮಾತನಾಡದಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಬಂಧ ವಿಧಿಸಿದೆ.
ಇಂಗ್ಲೆಂಡ್ ಪ್ರವಾಸದ ವೇಳೆ ಆನ್‌ಲೈನ್ ಬೆಟ್ಟಿಂಗ್ ಮತ್ತು ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಎನ್‌ಸಿಸಿಐಎ ಸಂಸ್ಥೆ ತನಿಖೆ ನಡೆಸುತ್ತಿದೆ.
ನ್ಯಾಯಾಲಯದಿಂದ ಹಿನ್ನಡೆಯಾದ ಬಳಿಕ ರಿಝ್ವಾನ್ ತಮ್ಮ ಫೋನ್ ಜಪ್ತಿ ವಿಚಾರವಾಗಿ ಐಸಿಸಿಗೆ ಪತ್ರ ಬರೆದು ಸ್ಪಷ್ಟನೆ ಕೋರಿದ್ದಾರೆ.