
ಕರ್ನಾಟಕದ ಸಾಲದ ಮೊತ್ತದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರ ಅವಧಿಯಲ್ಲೇ ಅತಿ ಹೆಚ್ಚು ಅಂದರೆ ಶೇ. 52.33ರಷ್ಟು ಸಾಲ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ ಎಂದು ತಿಳಿಸಿದ ಅವರು, ಸರ್ಕಾರ ಘೋಷಿಸಿರುವ ಅಲ್ಪ ಪರಿಹಾರವು ರೈತರಿಗೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬರದ ಸಂಕಷ್ಟದ ನಡುವೆಯೂ ಗ್ಯಾರಂಟಿ ಸಮಿತಿಗಳಿಗೆ ಮತ್ತು ಭಾರತ್ ಜೋಡೋ ಸಮಿತಿಗಳಿಗೆ ಸಾವಿರಾರು ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.