
ಬೆಂಗಳೂರಿನ ಗುಡ್ ಶೆಫರ್ಡ್ ಕಾನ್ವೆಂಟ್ ಬಳಿ 2024ರ ಮಾರ್ಚ್ 7ರಂದು ಮರದ ಕೊಂಬೆ ಬಿದ್ದು ಶೇಕಡ 85ರಷ್ಟು ಅಂಗವೈಕಲ್ಯಕ್ಕೆ ತುತ್ತಾದ ಜಿ. ಚಂದನ್ ಅವರಿಗೆ ಕರ್ನಾಟಕ ಹೈಕೋರ್ಟ್ 2.77 ಕೋಟಿ ರೂ. ಪರಿಹಾರ ನೀಡಲು ಆದೇಶಿಸಿದೆ.
ನಗರದಲ್ಲಿ ಮರಗಳ ಸಮರ್ಪಕ ನಿರ್ವಹಣೆ ಮಾಡದ ಬೆಂಗಳೂರು ಮಹಾನಗರ ಪಾಲಿಕೆ (GBA) ತೋರಿದ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ತರಾಟೆಗೆ ತೆಗೆದುಕೊಂಡಿದೆ.
ಮರಗಳ ನಿರ್ವಹಣೆಯಲ್ಲಿ ವಿಫಲವಾಗಿರುವ ಮಹಾನಗರ ಪಾಲಿಕೆಯು ಈ ಘಟನೆಗೆ ಸಂಪೂರ್ಣ ಹೊಣೆ ಹೊರಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.