Health & Environment
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಅಂಗವೈಕಲ್ಯ: ಜಿಬಿಎಗೆ 2.77 ಕೋಟಿ ರೂ. ದಂಡ

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಅಂಗವೈಕಲ್ಯ: ಜಿಬಿಎಗೆ 2.77 ಕೋಟಿ ರೂ. ದಂಡ

tv9kannada52m
THE BRIEF
1

ಬೆಂಗಳೂರಿನ ಗುಡ್ ಶೆಫರ್ಡ್ ಕಾನ್ವೆಂಟ್ ಬಳಿ 2024ರ ಮಾರ್ಚ್ 7ರಂದು ಮರದ ಕೊಂಬೆ ಬಿದ್ದು ಶೇಕಡ 85ರಷ್ಟು ಅಂಗವೈಕಲ್ಯಕ್ಕೆ ತುತ್ತಾದ ಜಿ. ಚಂದನ್ ಅವರಿಗೆ ಕರ್ನಾಟಕ ಹೈಕೋರ್ಟ್ 2.77 ಕೋಟಿ ರೂ. ಪರಿಹಾರ ನೀಡಲು ಆದೇಶಿಸಿದೆ.

2

ನಗರದಲ್ಲಿ ಮರಗಳ ಸಮರ್ಪಕ ನಿರ್ವಹಣೆ ಮಾಡದ ಬೆಂಗಳೂರು ಮಹಾನಗರ ಪಾಲಿಕೆ (GBA) ತೋರಿದ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ತರಾಟೆಗೆ ತೆಗೆದುಕೊಂಡಿದೆ.

3

ಮರಗಳ ನಿರ್ವಹಣೆಯಲ್ಲಿ ವಿಫಲವಾಗಿರುವ ಮಹಾನಗರ ಪಾಲಿಕೆಯು ಈ ಘಟನೆಗೆ ಸಂಪೂರ್ಣ ಹೊಣೆ ಹೊರಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.