
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆಗಸ್ಟ್ 26 ಮತ್ತು 27ರಂದು ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗಿನ ಭಾಗಮಂಡಲದಲ್ಲಿ ಕಳೆದ 24 ಗಂಟೆಯಲ್ಲಿ 15 ಸೆಂ.ಮೀ ಮಳೆ ದಾಖಲಾಗಿದ್ದು, ನಾಪೋಕ್ಲು, ಸುಳ್ಯ ಮತ್ತು ಸುಬ್ರಹ್ಮಣ್ಯದಲ್ಲಿ ತಲಾ 8 ಸೆಂ.ಮೀ ಮಳೆಯಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.