
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಪಂಚ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಈಗಾಗಲೇ 50 ಲಕ್ಷ ರೈತರಿಗೆ ತಲಾ 2,500 ರೂ. ಮೊದಲ ಕಂತಿನ ಪರಿಹಾರ ನೀಡಲಾಗಿದ್ದು, ಶೀಘ್ರವೇ ಮುಂದಿನ ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದರು.
ಬರ ನಿರ್ವಹಣೆಗಾಗಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಬಳಿ ಒಟ್ಟು 329 ಕೋಟಿ ರೂ. ಅನುದಾನ ಲಭ್ಯವಿದ್ದು, ಕುಡಿಯುವ ನೀರು ಹಾಗೂ ಮೇವಿಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.