
ಕೊಲಂಬೊದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ 117 ಎಸೆತಗಳಲ್ಲಿ 63 ರನ್ ಗಳಿಸಿ ಅರ್ಧಶತಕ ಸಿಡಿಸಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಪಡಿಕ್ಕಲ್ ಮತ್ತು ನಾಯಕ ಶುಭ್ಮನ್ ಗಿಲ್ ಜೋಡಿ ಶತಕದ ಜೊತೆಯಾಟ ನೀಡಿದ್ದು, ತಂಡವು 150 ರನ್ ಗಡಿ ದಾಟಲು ನೆರವಾಗಿದ್ದಾರೆ.
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಪಡಿಕ್ಕಲ್, ಈ ಪಂದ್ಯದಲ್ಲೂ ಉತ್ತಮ ಫಾರ್ಮ್ ಮುಂದುವರಿಸಿದ್ದು, ಭಾರತ ತಂಡವು ದ್ವಿಶತಕದ ಸನಿಹಕ್ಕೆ ತಲುಪಿದೆ.