
ಮಕೈನ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಆಸ್ಟ್ರೇಲಿಯಾದ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ ಕೇವಲ 64 ರನ್‌ಗಳಿಗೆ ಆಲೌಟ್ ಆಗಿದೆ.
ಮಿಚೆಲ್ ಸ್ಟಾರ್ಕ್ ಕೇವಲ 12 ರನ್ ನೀಡಿ 6 ವಿಕೆಟ್ ಪಡೆದರೆ, ನಾಯಕ ಪ್ಯಾಟ್ ಕಮಿನ್ಸ್ 3 ವಿಕೆಟ್ ಉರುಳಿಸಿ ಬಾಂಗ್ಲಾದೇಶ್ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಬಾಂಗ್ಲಾದೇಶ್ ತಂಡದ ಪರ ಹಸನ್ ಮಹಮೂದ್ 10 ರನ್ ಮತ್ತು ಮೆಹದಿ ಹಸನ್ ಮಿರಾಝ್ 11 ರನ್ ಗಳಿಸಿದ್ದೇ ಗರಿಷ್ಠ ಮೊತ್ತವಾಗಿದ್ದು, ಉಳಿದ ಆಟಗಾರರು ವೈಫಲ್ಯ ಅನುಭವಿಸಿದರು.