
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತುಟ್ಟಿಭತ್ಯೆಯಲ್ಲಿ ಶೇ. 3ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಹೊಸ ನಿರ್ಧಾರದಿಂದ ನೌಕರರ ತುಟ್ಟಿಭತ್ಯೆಯು ಮೂಲ ವೇತನದ ಶೇ. 60ರಿಂದ ಶೇ. 63ಕ್ಕೆ ಏರಿಕೆಯಾಗಿದ್ದು, ಪರಿಷ್ಕೃತ ದರವು 2026ರ ಜುಲೈ 1ರಿಂದ ಜಾರಿಗೆ ಬರುವಂತೆ ಅನ್ವಯಿಸಲಿದೆ.
ತುಟ್ಟಿಭತ್ಯೆ ಏರಿಕೆಯಿಂದ ಸರ್ಕಾರಕ್ಕೆ ಹೆಚ್ಚುವರಿಯಾಗಿ 10,016 ಕೋಟಿ ರೂ. ವೆಚ್ಚವಾಗಲಿದ್ದು, ನವೆಂಬರ್‌ನಲ್ಲಿ ಅರಿಯರ್ಸ್ ಸಮೇತ ಹಣ ಸಿಗಲಿದೆ.