
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಶಾನ್ ಮಸೂದ್ 19 ತಿಂಗಳ ನಂತರ ಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ.
ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಟೆಸ್ಟ್ ಶತಕ ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮಸೂದ್, ತಮ್ಮ 7ನೇ ಟೆಸ್ಟ್ ಶತಕವನ್ನು ಪೂರೈಸಿದರು.
ಮೊದಲ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ 311 ರನ್ ಗಳಿಸಿದ್ದು, ಪಾಕಿಸ್ತಾನ ಮೂರನೇ ದಿನದ ಭೋಜನ ವಿರಾಮದ ವೇಳೆಗೆ 8 ವಿಕೆಟ್ ನಷ್ಟಕ್ಕೆ 267 ರನ್ ಗಳಿಸಿದೆ.