
ದಾವಣಗೆರೆ ಜಿಲ್ಲೆಯಲ್ಲಿ ಜೂಜಾಟ, ಮಟ್ಕಾ ಮತ್ತು ಗಾಂಜಾ ಮಾರಾಟ ದಂಧೆಗಳು ಹೆಚ್ಚಾಗುತ್ತಿದ್ದು, ಯುವಕರು ಸಾಲದ ಸುಳಿಗೆ ಸಿಲುಕಿ ಮನೆ ಬಿಟ್ಟು ಹೋಗುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ದಂಧೆಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೂರ್ವ ವಲಯ ಐಜಿಪಿಯನ್ನು ವರ್ಗಾವಣೆ ಮಾಡಬೇಕೆಂದು ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಒಂದು ವೇಳೆ ಈ ದಂಧೆಗಳು ನಿಯಂತ್ರಣಕ್ಕೆ ಬಾರದಿದ್ದರೆ ತಾವೇ ಮುಂದೆ ನಿಂತು ಪ್ರತಿಭಟನೆ ನಡೆಸುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.