
ಕರ್ನಾಟಕವು ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರನ್ನು ಹರಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಡಿಎಂಕೆ ಪಕ್ಷವು ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಕರ್ನಾಟಕ ಸರ್ಕಾರ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಈ ಅರ್ಜಿ ಸಲ್ಲಿಸಲಾಗಿದೆ.
ಮುಂಗಾರು ಕೈಕೊಟ್ಟ ಕಾರಣ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ದಾಟಿಲ್ಲವಾದರೂ, ತಮಿಳುನಾಡು ಸರ್ಕಾರ ನೀರಿಗಾಗಿ ಹಠ ಹಿಡಿದಿದೆ.