
ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ 10.5 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಲು ರಾಜ್ಯ ಸರ್ಕಾರ ಬಿಎಂಆರ್ಸಿಎಲ್ಗೆ ಅಧಿಕೃತವಾಗಿ ಸೂಚನೆ ನೀಡಿದೆ.
ಈ ಯೋಜನೆಯು 9 ನಿಲ್ದಾಣಗಳನ್ನು ಒಳಗೊಂಡಿರಲಿದ್ದು, ನಾರಾಯಣ ಹೃದಯಾಲಯ, ಚೀನಾಪುರ ಸರ್ಕಲ್ ಮತ್ತು ಅತ್ತಿಬೆಲೆ ಟರ್ಮಿನಲ್ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸಲಿದೆ.
ತಮಿಳುನಾಡು ಸರ್ಕಾರ ಇತ್ತೀಚೆಗೆ ಹೊಸೂರಿನಿಂದ ಬೊಮ್ಮಸಂದ್ರದವರೆಗೆ ಮೆಟ್ರೋ ಯೋಜನೆ ಘೋಷಿಸಿದ ಬೆನ್ನಲ್ಲೇ, ಕರ್ನಾಟಕ ಸರ್ಕಾರ ಈ ಅಂತಾರಾಜ್ಯ ಸಂಪರ್ಕ ಯೋಜನೆಯನ್ನು ತ್ವರಿತಗೊಳಿಸಲು ಮುಂದಾಗಿದೆ.