
ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ತನ್ನ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ಕೂಡಲೇ ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹಂಚಿಕೆಯಾಗಿರುವ ಕಾವೇರಿ ನದಿ ನೀರಿನ ಪಾಲಿಗೆ ಗಂಭೀರ ಅಪಾಯ ಎದುರಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.