
ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪಂನಲ್ಲಿ ಅಕ್ಟೋಬರ್ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮ್ಮೇಳನ' (ESTIC 2026) ಅನ್ನು ಉದ್ಘಾಟಿಸಿದ್ದಾರೆ.
ಈ ಸಮ್ಮೇಳನದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಜೈವಿಕ ತಂತ್ರಜ್ಞಾನ ಸೇರಿದಂತೆ 12 ಪ್ರಮುಖ ವಲಯಗಳ ಕುರಿತು ಚರ್ಚೆ ನಡೆಯಲಿದ್ದು, 150ಕ್ಕೂ ಹೆಚ್ಚು ಡೀಪ್-ಟೆಕ್ ಸ್ಟಾರ್ಟ್‌ಅಪ್‌ಗಳ ಉತ್ಪನ್ನಗಳನ್ನು ಪ್ರದರ್ಶಿಸಲಾಗಿದೆ.
ಕಾರ್ಯಕ್ರಮದಲ್ಲಿ ದೇಶ-ವಿದೇಶಗಳ 300ಕ್ಕೂ ಅಧಿಕ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಿದ್ದು, ಅಕ್ಟೋಬರ್ 29ರವರೆಗೆ ಈ ಸಮಾವೇಶ ಮುಂದುವರಿಯಲಿದೆ.