
ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ ವತಿಯಿಂದ ಅವೆನ್ಯೂ ರಸ್ತೆಯಲ್ಲಿ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿದ್ದ ಅನಧಿಕೃತ ಅಂಗಡಿಗಳು ಮತ್ತು ತಾತ್ಕಾಲಿಕ ಶೇಡ್ಗಳನ್ನು ತೆರವುಗೊಳಿಸಲಾಗಿದೆ.
ಪಾದಚಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ರಸ್ತೆಯಲ್ಲೇ ನಡೆಯುವ ಸಾರ್ವಜನಿಕರಿಗೆ ಉಂಟಾಗುತ್ತಿದ್ದ ಅಪಘಾತದ ಅಪಾಯವನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ಪಾದಚಾರಿ ಮಾರ್ಗವನ್ನು ಮತ್ತೆ ಅತಿಕ್ರಮಿಸುವ ಅಂಗಡಿಕಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಮತ್ತು ದಂಡ ವಿಧಿಸುವುದಾಗಿ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.