
ಬೆಂಗಳೂರಿನ ಕಳಾಮಂದಿರ ಹತ್ತಿರದ ರಿಂಗ್ ರಸ್ತೆಯಲ್ಲಿ ಹಸುಗಳನ್ನು ಅಜಾಗರೂಕತೆಯಿಂದ ಬಿಟ್ಟು ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಆರೋಪದ ಮೇಲೆ ಮಾಲೀಕ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಆಗಸ್ಟ್ 10 ರಂದು ಸುಮಾರು 9 ರಿಂದ 10 ಹಸುಗಳು ರಸ್ತೆಯಲ್ಲಿ ಓಡಾಡಿಕೊಂಡಿದ್ದರಿಂದ ವಾಹನ ಸವಾರರಿಗೆ ತೊಂದರೆಯಾಗಿದ್ದು, ಎಚ್‌ಎಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 285 ರ ಅಡಿಯಲ್ಲಿ ಮಾರತ್ತಹಳ್ಳಿಯ ಅಶ್ವಥನಗರ ನಿವಾಸಿಯಾಗಿರುವ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.