
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.2.50ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಇದು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ಈ ಹೆಚ್ಚಳದಿಂದ ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕ ಅನುಕೂಲವಾಗುವ ನಿರೀಕ್ಷೆಯಿದೆ. ಅಧಿಕೃತ ಆದೇಶ ನವೆಂಬರ್ 5ರಂದು ಹೊರಬೀಳುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎನ್. ಅವರು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.