
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನವೆಂಬರ್ 20ರವರೆಗೆ ಕುಡಿಯಲು ಮತ್ತು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.
ಸೋಮವಾರ ವಿಕಾಸಸೌಧದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಜಲಾಶಯದಲ್ಲಿ 53 ಟಿಎಂಸಿ ನೀರು ಲಭ್ಯವಿರುವುದಾಗಿ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದರು.
ರಾಜ್ಯದಲ್ಲಿ ಬರಗಾಲ ಎದುರಾಗಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.