
ಕೊಲಂಬೊದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 9 ವಿಕೆಟ್ ನಷ್ಟಕ್ಕೆ 503 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.
ಟೀಂ ಇಂಡಿಯಾ ಪರ ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೇಲ್ ಶತಕ ಸಿಡಿಸಿದರೆ, ನಾಯಕ ಶುಭ್ಮನ್ ಗಿಲ್ ಹಾಗೂ ರಿಷಭ್ ಪಂತ್ ಅರ್ಧಶತಕಗಳ ಕೊಡುಗೆ ನೀಡಿದರು.
ಶ್ರೀಲಂಕಾ ಬೌಲರ್ ಅಸಿತಾ ಫೆರ್ನಾಂಡೋ 4 ವಿಕೆಟ್ ಪಡೆದರೆ, ಕೇಶರ ನುವಂತ 2, ಲಹಿರು ಕುಮಾರ ಮತ್ತು ಪ್ರಬಾತ್ ಜಯಸೂರ್ಯ ತಲಾ 1 ವಿಕೆಟ್ ಕಬಳಿಸಿ ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.