
ಬೆಂಗಳೂರಿನ ಐಟಿ-ಬಿಟಿ ಸಂಸ್ಥೆಗಳು ಸೇರಿದಂತೆ ಕರ್ನಾಟಕದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) 'ಆಗ್ರಹ ಅಭಿಯಾನ' ಆರಂಭಿಸಿದೆ.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಟಿ.ಎ. ಅವರ ನೇತೃತ್ವದಲ್ಲಿ ಹಲವು ತಂಡಗಳು ಬೆಂಗಳೂರಿನ ಖಾಸಗಿ ಸಂಸ್ಥೆಗಳಿಗೆ ಭೇಟಿ ನೀಡಿ ಆಗ್ರಹ ಪತ್ರ ಸಲ್ಲಿಸಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ.
ಈ ಅಭಿಯಾನ ನವೆಂಬರ್ ತಿಂಗಳ ಉದ್ದಕ್ಕೂ ರಾಜ್ಯದ ಎಲ್ಲ ಭಾಗಗಳಲ್ಲೂ ನಡೆಯಲಿದ್ದು, ಖಾಸಗಿ ಸಂಸ್ಥೆಗಳಿಂದ ಉದ್ಯೋಗಾವಕಾಶಗಳ ಅಂಕಿ ಅಂಶಗಳನ್ನು ಪಡೆದ ನಂತರ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು.