
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿ ನೀಟ್ 2026ರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್ 7ರಿಂದ ಅಧಿಕೃತವಾಗಿ ಆರಂಭಿಸುತ್ತಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 7ರ ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್ 9ರ ಮಧ್ಯಾಹ್ನ 2 ಗಂಟೆಯವರೆಗೆ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ತಮ್ಮ ಆಪ್ಷನ್‌ಗಳನ್ನು ಸೇವ್ ಮಾಡುವುದು ಕಡ್ಡಾಯವಾಗಿದೆ.
ಮೊದಲ ಸುತ್ತಿನಲ್ಲಿ ಸೀಟು ಸಿಗದವರು ಹಾಗೂ ಚಾಯ್ಸ್-2 ಮತ್ತು ಚಾಯ್ಸ್-3 ಆಯ್ಕೆ ಮಾಡಿದವರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಪರಿಶೀಲಿಸಲು ಸೂಚಿಸಲಾಗಿದೆ.