
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಆಚರಣೆ ವೇಳೆ ಯುವಕರಿಗೆ ಬೆದರಿಕೆ ಹಾಕಿದ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡಬೇಕಾದ ಅಧಿಕಾರಿಯೇ ಒಂದು ಸಮುದಾಯದ ಏಜೆಂಟ್‌ನಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ಯುವಕರಿಗೆ ಗದರಿಸಿ ಕಾರ್ಯಕ್ರಮ ರದ್ದುಪಡಿಸುವುದಾಗಿ ಬೆದರಿಕೆ ಹಾಕಿದ್ದರು.