
ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್ ರಸ್ತೆಯಲ್ಲಿ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 14,000 ಲೀಟರ್ ಹಾಲು ರಸ್ತೆಯಲ್ಲಿ ಹರಿದು ವ್ಯರ್ಥವಾಗಿದೆ.
ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಎಂಎಫ್ ಹಾಲು ಕೇಂದ್ರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಜಯ್ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.