
ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಂದ್ ಮಾಡಬಾರದೆಂಬ ಅಕ್ಟೋಬರ್ 9ರ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ದಾಖಲಿಸಿರುವ ಈ ಅರ್ಜಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಹಾಗೂ ಡಿಎಂಆರ್ಸಿ ಅಧ್ಯಕ್ಷೆ ಡಿ. ತಾರಾ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ವಿಶೇಷ ಪೀಠವು ಈ ಪ್ರಕರಣದ ವಿಚಾರಣೆಗಾಗಿ ಭಾನುವಾರ ವಿಶೇಷ ಕಲಾಪ ನಡೆಸಲಿದೆ.