
ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಭೈರತಿ ಸುರೇಶ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ದೂರಿನ ಅನ್ವಯ ಆರ್.ಟಿ.ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು.
ವಿಲ್ಸನ್ ಗಾರ್ಡನ್ ನಿವಾಸಿಯಾದ ಜಯಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಸ್ತುತ ವಿಚಾರಣೆಗೆ ಒಳಪಡಿಸಲಾಗಿದೆ.