
ಬಾಲಿವುಡ್ ನಟ ಸನ್ನಿ ಡಿಯೋಲ್ ತಾವು ಎಂದಿಗೂ ಪಾನ್ ಮಸಾಲಾ ಜಾಹೀರಾತುಗಳಲ್ಲಿ ನಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಅಂತಹ ಆಫರ್‌ಗಳನ್ನು ತಿರಸ್ಕರಿಸುತ್ತಿರುವುದಾಗಿ ತಿಳಿಸಿದ್ದಾರೆ.
ತಮ್ಮ ಆತ್ಮಸಾಕ್ಷಿಗೆ ಒಪ್ಪದ ಮತ್ತು ನಂಬಿಕೆ ಇಲ್ಲದ ಉತ್ಪನ್ನಗಳನ್ನು ಪ್ರಚಾರ ಮಾಡಲು ಬಯಸುವುದಿಲ್ಲ ಎಂದು ಅವರು ಶುಭಂಕರ್ ಮಿಶ್ರಾ ಅವರ ಪೋಡ್‌ಕಾಸ್ಟ್‌ನಲ್ಲಿ ಹೇಳಿದ್ದಾರೆ.
ಸನ್ನಿ ಡಿಯೋಲ್ ಅಭಿನಯದ ‘ಬಟ್ವಾರಾ 1947’ ಸಿನಿಮಾ ಆಗಸ್ಟ್ 14ರಂದು ಬಿಡುಗಡೆಯಾಗಿದ್ದು, ಇದರಲ್ಲಿ ಪ್ರೀತಿ ಜಿಂಟಾ ಮತ್ತು ಶಬಾನಾ ಆಜ್ಮಿ ಕೂಡ ನಟಿಸಿದ್ದಾರೆ.