Indian Politics
ಲಂಚದ ಆರೋಪ: ನೌಕರರ ತನಿಖೆಗೆ ಪೂರ್ವಾನುಮತಿ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಲಂಚದ ಆರೋಪ: ನೌಕರರ ತನಿಖೆಗೆ ಪೂರ್ವಾನುಮತಿ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

prajavani2h
THE BRIEF
1

ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರನ ವಿರುದ್ಧ ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪೂರ್ವ ಅನುಮತಿಯ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

2

ರಾಜಸ್ಥಾನದ ಪೊಲೀಸ್ ಕಾನ್‌ಸ್ಟೆಬಲ್ ತೇಜಾರಾಮ್ ವಿರುದ್ಧದ ಮೇಲ್ಮನವಿಯನ್ನು ವಜಾಗೊಳಿಸಿ ಅಕ್ಟೋಬರ್ 16ರಂದು ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ.

3

ಅವ್ಯವಹಾರ, ವಂಚನೆ ಹಾಗೂ ಲಂಚ ಪಡೆಯುವಂತಹ ಅಪರಾಧಗಳು ಕಾನೂನಿನ ರಕ್ಷಣೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.