
ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಚಿಕ್ಲಿಹೊಳೆ ಕಿರು ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.
ಕೇವಲ 15 ದಿನಗಳ ಹಿಂದೆ ನೀರಿಲ್ಲದೆ ಬಿಕೋ ಎನ್ನುತ್ತಿದ್ದ ಜಲಾಶಯ ಈಗ ಮೈದುಂಬಿಕೊಂಡಿದ್ದು, ಅರ್ಧ ಚಂದ್ರಾಕೃತಿಯ ಕಟ್ಟೆಯ ಮೇಲಿಂದ ನೀರು ಧುಮ್ಮಿಕ್ಕುವ ದೃಶ್ಯವನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಜಿಲ್ಲೆಯಾದ್ಯಂತ ನದಿ ಮತ್ತು ತೊರೆಗಳು ಉಕ್ಕಿ ಹರಿಯುತ್ತಿದ್ದು, ಮಳೆಯ ಆರ್ಭಟದಿಂದಾಗಿ ಜಲಾಶಯದ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ.