
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಯುಜಿಸಿ–ನೆಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, 97,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪಿಎಚ್‌ಡಿ ಪ್ರವೇಶಕ್ಕೆ ಮತ್ತು 4,000ಕ್ಕೂ ಹೆಚ್ಚು ಅಭ್ಯರ್ಥಿಗಳು ಜೆಆರ್‌ಎಫ್‌ಗೆ ಅರ್ಹತೆ ಪಡೆದಿದ್ದಾರೆ.
ಜೂನ್‌ನಲ್ಲಿ ನಡೆದಿದ್ದ ಈ ಪರೀಕ್ಷೆಗೆ ದೇಶದಾದ್ಯಂತ 6.07 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು, ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಿಂದಾಗಿ ಫಲಿತಾಂಶ ಪ್ರಕಟಣೆ ವಿಳಂಬವಾಗಿತ್ತು.
ಸಮಾಜಶಾಸ್ತ್ರ, ವಾಣಿಜ್ಯಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳ ಮರು ಪರೀಕ್ಷೆಯನ್ನು ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಎನ್‌ಟಿಎ ವೇಳಾಪಟ್ಟಿ ನಿಗದಿಪಡಿಸಿದೆ.