
ಮಧ್ಯಪ್ರದೇಶದ ಗ್ವಾಲಿಯರ್ ಅಪಘಾತ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತಾ ಕಾಲ್ತುಳಿತ ದುರಂತಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಒತ್ತಾಯಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.