
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕರ್ನಾಟಕ ಮತ್ತು ಗುಜರಾತ್‌ನ ಒಟ್ಟು 21 ಸ್ಥಳಗಳಲ್ಲಿ ಇಂದು ಬೃಹತ್ ದಾಳಿ ನಡೆಸಿದ್ದಾರೆ.
ಅಮಾನತುಗೊಂಡಿರುವ ಕೆಪಿಎಸ್‌ಸಿ ಸದಸ್ಯ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಶಾಂತಾ ಹೊಸಮನಿ ಮತ್ತು ಎಡುಟೆಸ್ಟ್ ಸೊಲ್ಯೂಷನ್ಸ್ ಸಂಸ್ಥೆಯ ಕಚೇರಿ ಹಾಗೂ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ಪಶುವೈದ್ಯಾಧಿಕಾರಿ ಹುದ್ದೆಗೆ ತಲಾ 70 ರಿಂದ 80 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ವಿಧಾನಸೌಧ ಠಾಣೆಯಲ್ಲಿ 4 ಎಫ್‌ಐಆರ್ ದಾಖಲಾಗಿದ್ದು, ಜುಲೈ 13ರಂದು ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.