
ಕುವೆಂಪು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಅಧಿಕಾರಿಯ ಡಿಜಿಟಲ್ ಸಹಿ ದುರ್ಬಳಕೆ ಮಾಡಿ ಅಂಕಪಟ್ಟಿ ತಿದ್ದುಪಡಿ ಮಾಡಿರುವ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ.
ಯುಯುಸಿಎಂಎಸ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನುಷಾ ಎಂಬಾಕೆ ಪ್ರತಿ ವಿಷಯಕ್ಕೆ 10,000 ರೂ. ನಂತೆ ಹಣ ಪಡೆದು ವಿದ್ಯಾರ್ಥಿಯನ್ನು ಪಾಸ್ ಮಾಡಿದ್ದಾಳೆ.
ಪ್ರಕರಣ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.