
ಕೊಲಂಬೊ ಟೆಸ್ಟ್ ಪಂದ್ಯದ ವೇಳೆ ಪಿಚ್ ಮಧ್ಯದಲ್ಲಿ ವಾಗ್ವಾದ ನಡೆಸಿದ ಟೀಂ ಇಂಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ಲಂಕಾ ವೇಗಿ ಅಸಿತಾ ಫೆರ್ನಾಂಡೋ ವಿರುದ್ಧ ಐಸಿಸಿ ಕ್ರಮ ಕೈಗೊಂಡಿದೆ.
ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.12 ಉಲ್ಲಂಘಿಸಿದ್ದಕ್ಕಾಗಿ ಇಬ್ಬರಿಗೂ ಪಂದ್ಯ ಶುಲ್ಕದ ಶೇಕಡಾ 25ರಷ್ಟು ದಂಡ ವಿಧಿಸಲಾಗಿದ್ದು, ತಲಾ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಶಿಫಾರಸ್ಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇಬ್ಬರೂ ಆಟಗಾರರು ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ತಿಳಿಸಿದೆ.