
ನವೆಂಬರ್ 1ರಂದು ಭಾನುವಾರ ಬಂದಿದ್ದರೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ವಾರದ ರಜೆಯ ನೆಪದಲ್ಲಿ ಅಥವಾ ಯಾವುದೇ ಕಾರಣಕ್ಕೂ ರಾಜ್ಯೋತ್ಸವ ಆಚರಣೆಯಿಂದ ವಿನಾಯಿತಿ ಪಡೆಯಲು ಅವಕಾಶವಿಲ್ಲ ಎಂದು ಇಲಾಖೆ ಖಡಕ್ ಸೂಚನೆ ನೀಡಿದೆ.
ಈ ಆದೇಶದ ಬೆನ್ನಲ್ಲೇ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಒಂದು ವಾರಗಳ ಕಾಲ ಕರ್ನಾಟಕದ ಸಂಸ್ಕೃತಿ ಬಿಂಬಿಸುವ ಉಡುಗೆ ಹಾಗೂ ಸಿಹಿ ತಿಂಡಿಗಳನ್ನು ಹಂಚಿ ವಿಶೇಷವಾಗಿ ಆಚರಿಸಲು ಮುಂದಾಗಿವೆ.