
ವಿದೇಶಾಂಗ ಸಚಿವ ಎಸ್. ಜೈಶಂಕರ್ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘಚಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಯಾವುದೇ ಸಂದರ್ಭದಲ್ಲೂ ವಾಣಿಜ್ಯ ಹಡಗುಗಳು ಮತ್ತು ನಾವಿಕರನ್ನು ಗುರಿಯಾಗಿಸಬಾರದು ಎಂದು ಭಾರತ ಬಲವಾಗಿ ಆಗ್ರಹಿಸಿದೆ.
ಪ್ರದೇಶದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸಲು ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗಗಳನ್ನು ಅನುಸರಿಸುವಂತೆ ಭಾರತ ಸಲಹೆ ನೀಡಿದೆ.