
ತೆಲಂಗಾಣ ವಿಧಾನಸಭೆ ಆವರಣದಲ್ಲಿ ಮಂಗಳವಾರ ಹಿರಿಯ ಐಎಎಸ್ ಅಧಿಕಾರಿ ನವೀನ್ ಮಿತ್ತಲ್ ಅವರ ಆಪ್ತ ಕಾರ್ಯದರ್ಶಿ ರಾಜು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಘಟನೆ ನಡೆದ ತಕ್ಷಣ ಸಚಿವ ವಕಿತಿ ಶ್ರೀಹರಿ ಅವರು ಸ್ಥಳದಲ್ಲೇ ಸಿಪಿಆರ್ (CPR) ನೀಡುವ ಮೂಲಕ ಪ್ರಾಣ ಉಳಿಸಲು ಪ್ರಯತ್ನಿಸಿದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ರಾಜು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯ ನಡುವೆಯೇ ವಿಧಾನಸಭೆಯ ಹೊರಗೆ ಕಾಂಗ್ರೆಸ್ ಮತ್ತು ಬಿಆರ್‌ಎಸ್ ನಡುವೆ ರಾಜಕೀಯ ಸಂಘರ್ಷ ಭುಗಿಲೆದ್ದಿದ್ದು, ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.