
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಆಗಸ್ಟ್ 2ರ ತಡರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಭಾರಿ ಗುಡ್ಡ ಕುಸಿತದ ದುರಂತದಲ್ಲಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಭಾರಿ ಮಳೆಯಿಂದಾಗಿ ತಡೆಗೋಡೆ ಕುಸಿದು ಕಾರ್ಮಿಕರು ವಾಸವಿದ್ದ ಶೆಡ್‌ಗಳ ಮೇಲೆ ಮಣ್ಣು ಬಿದ್ದಿದ್ದು, ಘಟನೆಯಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, ಪಕ್ಕದ ಶೆಡ್‌ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ.
ಗುಡ್ಡ ಕುಸಿಯುವ ಶಬ್ದ ಕೇಳಿ ಎಚ್ಚೆತ್ತುಕೊಂಡ 22 ಮಂದಿ ಕೂಲಿ ಕಾರ್ಮಿಕರು ಶೆಡ್‌ನಿಂದ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.