
ಸವದತ್ತಿ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಪಟುಗಳು ಬೆಳಿಗ್ಗೆ 9 ಗಂಟೆಗೆ ಹಾಜರಾಗಬೇಕು.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕ್ರೀಡಾ ಸಂಘಗಳ ಸದಸ್ಯರು ಭಾಗವಹಿಸಲು ಅವಕಾಶವಿದ್ದು, dasaracmcup.in ವೆಬ್ಸೈಟ್ನಲ್ಲಿ ಆನ್ಲೈನ್ ನೋಂದಣಿ ಕಡ್ಡಾಯಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತರು 8317456301 ಅಥವಾ 9036410054 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.