
ರಾಜ್ಯದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧಿಸಿರುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.
ಈ ನಿಷೇಧದಿಂದ ರಾಜ್ಯದ ಸುಮಾರು 12 ಜಿಲ್ಲೆಗಳ ಲಕ್ಷಾಂತರ ಅಡಿಕೆ ಬೆಳೆಗಾರರ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿದ್ದು, ಅಡಿಕೆಗೆ ಬೇಡಿಕೆ ಕುಸಿಯುವ ಆತಂಕ ಎದುರಾಗಿದೆ.
ರೈತರ ಆರ್ಥಿಕ ಹಿತದೃಷ್ಟಿಯಿಂದ ಸರ್ಕಾರವು ಕೂಡಲೇ ಈ ನಿಷೇಧದ ಕುರಿತು ಮರುಪರಿಶೀಲನೆ ನಡೆಸಬೇಕು ಎಂದು ನಿಯೋಗ ಆಗ್ರಹಿಸಿದೆ.