
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಆಗಸ್ಟ್ 24 ರವರೆಗೆ ಎಚ್ಚರಿಕೆ ನೀಡಲಾಗಿದೆ.
ಸೆಪ್ಟೆಂಬರ್ 2 ರವರೆಗೆ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ದೀರ್ಘಾವಧಿಯ ಸರಾಸರಿಗಿಂತ ಶೇ. 14 ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ಐಎಂಡಿ ವರದಿ ತಿಳಿಸಿದೆ.