
ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ಸಿಐಡಿ ವರದಿಯ ಪ್ರಕಾರ ಇದುವರೆಗೆ 1.5 ಕೋಟಿ ರೂ.ಗೂ ಹೆಚ್ಚು ನಗದು ಮತ್ತು 22 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಅಭ್ಯರ್ಥಿಗಳಿಂದ ಹಣ ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ವಿರುದ್ಧವೂ ಆರೋಪವಿದ್ದು, ಅವರು ತಮ್ಮ ಗೆಳತಿಗೆ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕೊಡಿಸಿದ್ದರು ಎಂದು ವರದಿಯಾಗಿದೆ.