
ಕೆಇಎ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಉದ್ಯೋಗಕ್ಕಾಗಿಯೇ ಪಡೆದ ಹೊಸ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯ ಎಂದು ಆದೇಶಿಸಿರುವುದು ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸಿದೆ.
ಹಳೆಯ ಪ್ರಮಾಣಪತ್ರ ರದ್ದುಗೊಳಿಸಿ ಹೊಸದಕ್ಕೆ ಅರ್ಜಿ ಸಲ್ಲಿಸಲು ತಹಶೀಲ್ದಾರ್ ಕಚೇರಿಗಳಲ್ಲಿ ವಿಳಂಬವಾಗುತ್ತಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಹತ್ತಿರ ಬರುತ್ತಿದೆ.
ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಯಾಗಿರುವುದರಿಂದ ಪ್ರವರ್ಗ-ಎ, ಬಿ, ಸಿ ಎಂದು ನಮೂದಿಸಿದ ಹೊಸ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.