ಕೇಂದ್ರ ಸರ್ಕಾರವು ಪ್ರಸಕ್ತ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ (ಅಕ್ಟೋಬರ್‌ನಿಂದ ಮಾರ್ಚ್) ಷೇರುಪೇಟೆಯ ಮೂಲಕ ₹7.86 ಲಕ್ಷ ಕೋಟಿ ಸಾಲ ಸಂಗ್ರಹಿಸಲು ನಿರ್ಧರಿಸಿದೆ.
ಈ ಮೊತ್ತವನ್ನು ಸೇರಿಸಿದರೆ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟು ₹15.99 ಲಕ್ಷ ಕೋಟಿ ಬಂಡವಾಳ ಸಂಗ್ರಹವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
₹1.14 ಲಕ್ಷ ಕೋಟಿ ಮೌಲ್ಯದ ಸರ್ಕಾರಿ ಸಾಲಪತ್ರಗಳು ಮೆಚ್ಯೂರ್ ಆಗುವುದರಿಂದ, ನಿರೀಕ್ಷಿತ ಸಾಲದ ಪ್ರಮಾಣದಲ್ಲಿ ₹1.20 ಲಕ್ಷ ಕೋಟಿ ಕಡಿಮೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.