
ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ 23ರಂದು ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಯುವತಿ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾಳೆ.
ನೋಯ್ಡಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಯುವತಿಯ ವಯಸ್ಸು 25 ಎಂದು ನಮೂದಾಗಿದ್ದರೆ, ಕ್ಷಮೆಯಾಚನೆ ವಿಡಿಯೋದಲ್ಲಿ ಆಕೆ ತನಗೆ 15 ವರ್ಷ ಎಂದು ಹೇಳಿಕೊಂಡಿದ್ದಾಳೆ.
ಪ್ರಕರಣವನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಪೊಲೀಸರು ವಿಡಿಯೋದ ನೈಜತೆ ಮತ್ತು ಯುವತಿಯ ವಯಸ್ಸಿನ ಕುರಿತು ತನಿಖೆ ನಡೆಸುತ್ತಿದ್ದಾರೆ.