
ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಆಗಸ್ಟ್ 13ರಿಂದ 27ರವರೆಗೆ ನಡೆಯಲಿರುವ 16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಜಯಚಂದ್ರ ಅವರು ನಡೆಸಿಕೊಡಲಿದ್ದಾರೆ.
ಅಧಿವೇಶನದ ಮೊದಲ ದಿನವಾದ ಗುರುವಾರ ಡಿ. ಸುಧಾಕರ್ ಹಾಗೂ ಚನ್ನಮ್ಮ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ ಸೂಚಿಸಲಾಗುವುದು.